ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ ಹಾಗೂ ಗಲಾಟೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಈ ಕುರಿತು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಪುಟ್ಟ ಮಾದಯ್ಯ ಅವರು ಮಾಹಿತಿ ನೀಡಿ, ಮಾನ್ವಿ ತಾಲೂಕಿನಲ್ಲಿ ಐದು ಹಾಗೂ ರಾಯಚೂರಿನ ಮಾರ್ಕೆಟ್ ಎರಡು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಪ್ರಕರಣ ಸದರಬಜಾರ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣಗಳು ಮಡ್ಡಿಪೇಟೆಯಲ್ಲಿ ನಡೆದ ಗಲಾಟೆಗೆ ಸುಮೋಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.