ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಭೋಗಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಪತ್ನಿಯ ಶೀಲ ಶಂಕಿಸಿ ಯಲ್ಲಪ್ಪ ಎನ್ನುವಂತ ಪತಿಯು ಶೇವಿಂಗ್ ಮಾಡಿಕೊಳ್ಳುವ ಬ್ಲೇಡಿನಿಂದ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಭಾನುವಾರ ಬೆಳಗ್ಗೆ ಯಲ್ಲಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಶವವನ್ನು ಲಿಂಗಸುಗೂರಿನ ತಾಲೂಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ತರಲಾಗಿದ್ದು. ಘಟನಾ ಸ್ಥಳಕ್ಕೆ ಡಿವೈಎಸ್ಪಿ ದತ್ತಾತ್ರೇಯ ಕಾರಣ ಹಾಗೂ ಮಸ್ಕಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.