ಸುಪ್ರೀಂ ಆದೇಶ ಗ್ರಾಮೀಣ ಭಾಗಕ್ಕೂ ವಿಸ್ತರಿಸಿ ಬೀದಿ ನಾಯಿಗಳ ಕಾಟಕ್ಕೆ ಕಡಿವಾಣ ಹಾಕಿ ಎಂದು ಕಾಕತಿ ಗ್ರಾಮಸ್ಥರು ಪ್ರತಿಭಟನೆ. ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸಲು ಸುಪ್ರೀಂ ಕೋರ್ಟ್ ಜಾರಿ ಮಾಡಿರುವ ಆದೇಶವನ್ನು ಕೇವಲ ನಗರ ಪ್ರದೇಶಕ್ಕೆ ಜಾರಿ ಮಾಡದೇ, ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸುವಂತೆ ಆಗ್ರಹಿಸಿ, ಸೋಮವಾರ ಬೀದಿ ನಾಯಿಗಳ ಹಾವಳಿಯಿಂದ ರೋಸಿ ಹೋದ ಕಾಕತಿ ಗ್ರಾಮಸ್ಥರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.