ಧಾರವಾಡ ಜಿಲ್ಲೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾನ್ಯ ಇಂಧನ ಇಲಾಖೆ ಸಚಿವರಾದ ಕೆ.ಜೆ.ಜಾರ್ಜ್ ಅವರನ್ನು ಆತ್ಮೀಯವಾಗಿ ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಸ್ವಾಗತಿಸಿ ನಂತರ ನಮ್ಮ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಿ ಪಕ್ಷದ ಸಭೆಯಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಹು-ಧಾ ಪೋಲಿಸ ಕಮಿಷನರ್ ಎನ್ ಶಶಿಕುಮಾರ, ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಅನೀಲಕುಮಾರ ಪಾಟೀಲ, ಹೆಸ್ಕಾಂ ಅಧ್ಯಕ್ಷರಾದ ಅಜ್ಜಂಪೀರ ಖಾದ್ರಿ ಸೇರಿದಂತೆ ಉಪಸ್ಥಿತರಿದ್ದರು.