ಬೀದರ್ : ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೀದರ್ ಜಿಲ್ಲೆಯಲ್ಲಿ ರೈತರು ಬೆಳೆದ ಹೆಸರು, ಉದ್ದು, ತೊಗರಿ, ಸೋಯಾಬೀನ್ ಸೇರಿದಂತೆ ಸಾವಿರಾರು ಎಕರೆಯ ಬೆಳೆ ನಾಶವಾಗಿದೆ. ಅತಿವೃಷ್ಟಿಯಿಂದ ನೂರಾರು ಮನೆಗಳು, ರಸ್ತೆ-ಸೇತುವೆಗಳು ಹಾಗೂ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಧಾನ್ಯ ಹಾಳಾಗಿದ್ದು, ಕೂಡಲೇ ಸರ್ಕಾರ ಪರಿಹಾರ ನೀಡಬೇಕು ಎಂದು ಯುವ ಕ್ರಾಂತಿ ಸಂಘಟನೆ ಸೋಮವಾರ ಮಧ್ಯಾಹ್ನ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದಾರೆ.