ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿ ಬಿದರೆಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಿರುವ ತುಮಕೂರು ವಿಶ್ವವಿದ್ಯಾಲಯ(ಜ್ಞಾನಸಿರಿ ಕ್ಯಾಂಪಸ್)ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಾಣ ಮಾಡುವ ಹಿನ್ನೆಲೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳ ಪರಿಶೀಲನೆ ನಡೆಸಿದರು. ಅವರು ಮಂಗಳವಾರ ಮಧ್ಯಾಹ್ನ ಸುಮಾರು 3 ರ ಸಮಯದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಜ್ಞಾನಸಿರಿ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ಈ ಚತುಷ್ಪಥ ರಸ್ತೆಯು ಸೋಪನಹಳ್ಳಿ ಗ್ರಾಮ ಮಾರ್ಗದಲ್ಲಿ ಹಾದು ಹೋಗಲಿದೆ.