ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ತಿಪ್ಪನಹಳ್ಳಿ ಗ್ರಾಮದಿಂದ ಅನವಾರ ಮುಖ್ಯರಸ್ತೆಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ದುರಸ್ತಿಗೊಳಿಸುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ. ಬುಧವಾರ ಮಧ್ಯಾಹ್ನ ರಸ್ತೆಯ ಬಳಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ, ಭೀಮರಾಯ ಪೂಜಾರಿ ಮಾತನಾಡಿ, ಶಾಸಕರು ಈ ರಸ್ತೆ ಸುಧಾರಣೆ ಮಾಡಬೇಕು,ಇಲ್ಲವಾದಲ್ಲಿ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.