ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿಯನ್ನು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ನಡೆಸಲಾಯಿತು. ಮಂಗಳವಾರ ರಾತ್ರಿ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಮಲಗಿ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ, ಸೇವಾ ಭದ್ರತೆ, ಕೆಲಸದ ಒತ್ತಡ ಕಡಿಮೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಯಿತು.