ದೊಡ್ಡಬಳ್ಳಾಪುರ : ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಗ್ರಾಮ ಪಂಚಾಯತ್ ಸದಸ್ಯರು, ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು ಮತ್ತು ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಶಾಸಕ ಧೀರಜ್ ಮುನಿರಾಜು ಮುಖಂಡರನ್ನ ಪಕ್ಷಕ್ಕೆ ಸ್ವಾಗತಿಸಿದರು. ಶಾಸಕ ಧೀರಜ್ ಮುನಿರಾಜು ಮನೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜಿ.ಎ.ಮುನಿಕೃಷ್ಣಪ್ಪ, ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷ ನಾಗರಾಜು ಬಾಬು, ಮುಖಂಡರಾದ ವಿನಯ್ ಮತ್ತು ಮುನಿರಾಜು ನೇತೃತ್ವದಲ್ಲಿ 35ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.