ಅರಕೇರ ಪಟ್ಟಣದಲ್ಲಿ ವರದಿಗೆ ತೆರಳಿದ್ದ ಪತ್ರಕರ್ತರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಇದನ್ನು ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಸಮಿತಿ ಆಗಸ್ಟ್ 25 ರ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೊತ್ತದೊಡ್ಡಿ ವಸತಿ ಶಾಲೆಯಲ್ಲಿ ಅನಾರೋಗ್ಯಕ್ಕೆ ತುತ್ತಾದ ವಿದ್ಯಾರ್ಥಿಗಳನ್ನು ಅರಕೇರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಪತ್ರಕರ್ತರು ವಿಡಿಯೋ, ಫೋಟೊ ಚಿತ್ರೀಕರಣ ಮಾಡುತ್ತಿರುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಪ್ರಿನ್ಸಿಪಾಲ್ ಸುರೇಶ ವರ್ಮಾ ಮಾಹಿತಿ ಮತ್ತು ಚಿತ್ರ ಸಂಗ್ರಹಿಸಿದ ಮಾಧ್ಯಮದವರೊಂದಿಗೆ ಅನುಚಿತವಾಗಿ ವರ್ತಿಸಿದರು. ಮಾಧ್ಯಮದವರು ಲೋಫರ್ಸ್, ಉಪಯೋಗಕ್ಕೆ ಬಾರದವರು, ಇಡಿಯಟ್ಸ್ ನೀವೇನು ಮಾಹಿತಿ ಪಡಿಯುತ್ತೀ