ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ‘ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 8, ಸೋಮವಾರ ಮಧ್ಯಾಹ್ನ 12 ಗಂಟೆಗೆ ಗ್ರಾಮಪಂಚಾಯತಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಮಾತನಾಡಿ, “ಕರ್ನಾಟಕದಲ್ಲಿ ಜಾರಿಯಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶದಲ್ಲಿಯೇ ಮಾದರಿಯಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಸೆ ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ತಲುಪಬೇಕು ಎಂಬುದು” ಎಂದು