ನಗರದಲ್ಲಿ ಶನಿವಾರ ಮಧ್ಯಾಹ್ನ 2.30ಕ್ಕೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಮೂಲಕ ಗ್ರಾಮ ಪಂಚಾಯತ್, ಶಾಲೆ, ಅಂಗನವಾಡಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಕೇಂದ್ರಗಳನ್ನಾಗಿ ರೂಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ.ದಿಲೀಷ್ ಶಶಿ ತಿಳಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ ಇರುವ ಗ್ರಾಮ ಪಂಚಾಯತ್, ಶಾಲೆ ಅಂಗನವಾಡಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ವಹಣೆಗೆ ಈಗಾಗಲೇ ಸರ್ಕಾರದ ರೂಪಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿಕೊಂಡು ಮತ್ತು ಲಭ್ಯವಿರುವ ಸೌಕರ್ಯಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.