ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋಪಿಶೆಟ್ಟಿ ಕೊಪ್ಪ ಗ್ರಾಮದ ವಿವಿಧ ಸರ್ವೇ ನಂಬರ್ ಗಳ 104 ಎಕರೆ ಭೂಪ್ರದೇಶದ ಪೈಕಿ 30 ಎಕರೆ ಜಮೀನನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಸರ್ಕಾರದ ಪೂರ್ವ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ ನಗರದ ಸೂಡಾ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು.