ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ಪದೇ ಪದೇ ಪ್ರಸ್ತಾಪಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದರು . ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಧರ್ಮಸ್ಥಳದ ಪರವಾಗಿ ಬಿಜೆಪಿ ಯಾತ್ರೆಯನ್ನು ಆರಂಭಿಸಿದೆ ಆದರೆ ಸೌಜನ್ಯ ಪ್ರಕರಣದಲ್ಲಿ ಎಸ್‌ಐಟಿ ರಚನೆ ಮಾಡಬೇಕು ಎಂದು ಮೊದಲ ಬಾರಿಗೆ ಹೋರಾಟ ಮಾಡಿದವರೇ ಅವರು ಆದರೆ ಈಗ ಉಸರುವಳ್ಳಿ ತರ ಆಡುತ್ತಿದ್ದಾರೆ. ಅವರು ಡೋಂಗಿಗಳು, ಎಸ್‌ಐಟಿ ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದು ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ.