ಕಲಬುರಗಿ : ಬೆಳಗಾವಿ ಮಾದರಿಯಲ್ಲಿ ಕಲಬುರಗಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಬೇಕೆಂದು ಕೆಪಿಆರ್‌ಎಸ್ ಸಂಘಟನೆ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.. ಸೆ4 ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಮಾತನಾಡಿದ ಅವರು, 1 ಟನ್ ಕಬ್ಬಿನ ಸಕ್ಕರೆ ಇಳುವರಿ ಆಧಾರದಲ್ಲಿ ₹5 ಸಾವಿರ ಬೆಲೆ ನಿಗದಿ ಮಾಡಬೇಕು, ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿ ಮಾಡಬೇಕು, ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿಯಲ್ಲಿ ಕಂಡು ಬರ್ತಿರೋ ದೋಷವನ್ನ ಸರಿಪಡಿಸಬೇಕೆಂದು ಶರಣಬಸಪ್ಪ ಮಮಶೆಟ್ಟಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.