ಪ್ರಸ್ತಾ ಗೌರಿ ಗಣೇಶ ಹಬ್ಬ ಹಾಗೂ ಮುಂಬರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ಗುರುವಾರ ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಯಿತು. ಎಎಸ್ಪಿ ರಮೇಶ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಎಸ್ ಎ ಎಫ್ ಮತ್ತು ಆರ್ ಎ ಎಫ್ ನ ತುಕಡಿಗಳನ್ನ ಒಳಗೊಂಡಂತಹ ತಂಡ ಆಯನೂರಿನ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.