ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್ ಅವರು ಗುರುವಾರ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು, ನಿಕಟ ಪೂರ್ವ ಅಧ್ಯಕ್ಷ ಡಾ.ಡಿ.ಎಮ್.ಹಿರೇಮಠ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ, ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಅವರು ವೇದಿಕೆಯಲ್ಲಿದ್ದರು. ಹಿರಿಯ ಸಾಹಿತಿ ಡಾ.ವಾಯ್.ಎಮ್.ಯಾಕೋಳ್ಳಿ, ಡಾ.ಶಿಲಾಧರ ಮುಗಳಿ, ಡಾ.ಶರಣಮ್ಮ ಗೊರೆಬಾಳ ಇದ್ದರು.