ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿದ್ದ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಪನ್ನಗೊಂಡಿತು. ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿ ಪುಷ್ಪ ಗೌರವವನ್ನು ಸಲ್ಲಿಸಿದರು. ಆನಂತರ ನಾರಾಯಣ ಗುರುಗಳ ಉಪದೇಶಗಳು ಕುರಿತಂತೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಅನಂತ ನಾಯ್ಕ ಅವರನ್ನು ಸನ್ಮಾನಿಸಲಾಯಿತು.