ಚಿತ್ರದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪಠ್ಯಾಧಾರಿತ ಸಾಂಸ್ಕೃತಿಕ ಓದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ.ಬಿ.ದೇವರಾಜ ಕ್ರೀಡಾ ಸಾಂಸ್ಕೃತಿಕ ಟ್ರಸ್ಟ್, ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆರ್ಥಿಕ ಯುವಚಿಂತಕ ಡಿ.ಬಸವರಾಜ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದು ಹಿರಿಯರ ಮಾರ್ಗದರ್ಶನಗಳು ಮನುಕುಲದ ಭವಿಷ್ಯಕ್ಕೆ ಉತ್ತಮ ಅಡಿಪಾಯವಾಗಿದೆ ಎಂದು ತಿಳಿಸಿದರು