ಕೇರವಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟವು ಶುಕ್ರವಾರ ಸಂಜೆ 4ರವರೆಗೆ ನಡೆಯಿತು. ಕೇರವಡಿ ಪ್ರೌಢ ಶಾಲಾ ಆವರಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ ನಾಯ್ಕ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಅಧ್ಯಕ್ಷೆ ಜಿಯಾ ಕೊಳಂಕರ್ ವಹಿಸಿದ್ದರು. ಸಿಆರ್ಪಿ ಅಶೋಕ್ ಬಾಡಕರ್ ಸ್ವಾಗತ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದೀಪ ನಾಯ್ಕ ಮತ್ತು ಹಿರಿಯರಾದ ಬಾಲಚಂದ್ರ ನಾಯ್ಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.