ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಇಂಧನ ಇಲಾಖೆಯ ಧಾರವಾಡ ಜಿಲ್ಲಾಮಟ್ಟದ ಅಧಿಕಾರಿಗಳಿಂದ ಇಂಧನ ಇಲಾಖೆಯ ಸಂಬಧಿಸಿದ ಮಾಹಿತಿ ಪಡೆದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ಶಾಸಕ ಎನ್ ಎಚ್ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್ ಪಾಟೀಲ ಸೇರಿದಂತೆ ಇತರರು ಇದ್ದರು.