ರೈತರ ಜೊತೆ ಅನುಚಿತವಾಗಿ ವರ್ತಿಸಿದ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರೈತ ಮುಖಂಡರಾದ ಮಾಡ್ರಹಳ್ಳಿ ಮಹಾದೇವಪ್ಪ, ಗುರುಪ್ರಸಾದ್ ನೇತೃತ್ವದಲ್ಲಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ರಸ್ತೆ ತಡೆ ನಡೆಸಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.