ಮರವಂತೆಯ ಕೊಲ್ಲೂರು ನದಿಯಲ್ಲಿ ಮೋಜು ಮಸ್ತಿಗೆ ತೆರಳಿದ್ದು, ಪ್ರವಾಸಿಗರ ಬೋಟ್ ಮಗುಚಿ, ನೀರು ಪಾಲಾದ ಇಬ್ಬರನ್ನು ಎನ್.ಡಿ.ಆರ್.ಎಫ್ ತಂಡವು ರಕ್ಷಣೆ ಮಾಡಿ ಪ್ರಾಣಾಪಾಯದಿಂದ ಪಾರು ಮಾಡಿದೆ. ಜಿಲ್ಲೆಯಲ್ಲಿ ಪ್ರವಾಸಕ್ಕೆ ಆಗಮಿಸಿದ್ದ ಯುವಕರ ತಂಡವು ವಿವಿಧ ಸ್ಥಳಗಳನ್ನು ವೀಕ್ಷಿಸಿ, ಮರವಂತೆ ಗ್ರಾಮದ ವರಾಹಸ್ವಾಮಿ ದೇವಸ್ಥಾನದ ಮುಂಭಾಗ ಹರಿಯುವ ಕೊಲ್ಲೂರು ನದಿಯಲ್ಲಿ ದೋಣಿ ವಿಹಾರಕ್ಕೆ ಹೋದಂತಹ ಸಂದರ್ಭದಲ್ಲಿ ಅಲ್ಲಿದ್ದ ಪೊಲೀಸರು ದೋಣಿ ವಿಹಾರಕ್ಕೆ ನಿರ್ಬಂಧವಿರುವುದಾಗಿ ತಿಳಿಸಿದರೂ ಅದನ್ನು ಲೆಕ್ಕಿಸದೇ ಪ್ರಕ್ಷುಬ್ಧ ವಾತಾವರಣವಿದ್ದರೂ ನದಿಗೆ ತೆರಳಿದಾಗ ಭಾರೀ ಗಾಳಿಗೆ ಅವರುಗಳು ಸಂಚರಿಸುತ್ತಿದ್ದ ಬೋಟ್ ಮಗುಚಿ ಅದರಲ್ಲಿದ್ದ ನಾಲ್ವರು ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.