ಕಲಬುರಗಿ : ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನಿರಂತರವಾಗಿ ನೀರು ಬಿಡಲಾಗ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಕಲಬುರಗಿ ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ ಅಂತಾ ಕಲಬುರಗಿ ಡಿಸಿ ಬಿ ಫೌಜಿಯಾ ತರನ್ನುಮ್ ಹೇಳಿದ್ದಾರೆ.. ಆ21 ರಂದು ಮಧ್ಯಾನ 2 ಗಂಟೆಗೆ ನಗರದಲ್ಲಿ ಮಾತನಾಡಿದ ಅವರು, ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ಅಫಜಲಪುರ, ಜೇವರ್ಗಿ ಮತ್ತು ಚಿತ್ತಾಪುರ ತಾಲೂಕಿನ ಸನ್ನತಿವರೆಗೆ ಪರಿಸ್ಥಿತಿ ಮೇಲೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಮತ್ತು ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಗಾಗಿ ಎಸ್‌ಡಿಆರ್‌ಎಫ್ ತಂಡವನ್ನ ನಿಯೋಜಿಸಲಾಗಿದೆ ಅಂತಾ ಡಿಸಿ ಫೌಜಿಯಾ ತರನ್ನುಮ್ ಹೇಳಿದ್ದಾರೆ.