ಕುಣಿಗಲ್ ಪಟ್ಟಣದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಮುಂದಾಗಿರುವ ಜಾಗದಲ್ಲಿ ವಾಸವಿರುವ ದಲಿತ ಕುಟುಂಬಗಳನ್ನ ಒಕ್ಕಲೆಬ್ಬಿಸಬಾರದು ಎಂದು ದಲಿತ ಮುಖಂಡ ದಲಿತ ನಾರಾಯಣ್ ಆಗ್ರಹಿಸಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ 4 ರ ಸಮಯದಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಅವರು 1977 ರಲ್ಲಿ 9 ಗುಂಟೆ ಜಮೀನು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಮಂಜೂರು ಆಗಿತ್ತು. ವಾರ್ಷಿಕ 80 ರೂ ದರ ವಿಧಿಸಿ 20 ವರ್ಷಕ್ಕೆ ಗುತ್ತಿಗೆ ನೀಡಲಾಗಿತ್ತು.ಆದರೆ ಗುತ್ತಿಗೆ ಅವಧಿ ಮುಗಿದಿದೆ. ಈ ಹಿನ್ನೆಲೆ ಶಾಸಕ ಡಾ. ಹೆಚ್. ಡಿ. ರಂಗನಾಥ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಅವರು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ನೀಡಲಾಗಿದ್ದ ಗುತ್ತಿಗೆ ಅವಧಿಯನ್ನ ನವೀಕರಣಕ್ಕಾಗಿ 2023 ರಲ್ಲಿ ಪ್ರಾದೇಶಿಕ ಆಯುಕ್ತರಿಗೆ ಆರ್ಜಿ ಸಲ್ಲಿಸಿದ್ದರು.