ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಿನ್ನೆಲೆ ನಗರದಲ್ಲಿ ಸಂಗೊಳ್ಳಿ ರಾಯಣ್ಣ ಕಾಲೇಜ್ ವತಿಯಿಂದ ಜಾಗೃತಿ ರ್ಯಾಲಿ ನಡೆಸಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಮತ್ತು ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ ವತಿಯಿಂದ ಶುಕ್ರವಾರ ನಗರದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಜಾಗೃತಿ ರ್ಯಾಲಿಯನ್ನು ನಡೆಸಲಾಯಿತು. ಜೀವನದಲ್ಲಿ ಕ್ರೀಡೆಯ ಮಹತ್ವ ತಿಳಿಸಿಕೊಟ್ಟ ಉಪನ್ಯಾಸಕರು ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಕರೆ ನೀಡಿದರು