59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಠ ಜಾತಿಗಳನ್ನು ಪ್ರವರ್ಗ-1ರಲ್ಲಿಯೇ ಇರಿಸಿ ಶೇ.1.ರಷ್ಟು ಮೀಸಲಾತಿ ನಿಗದಿಗೊಳಿಸುವಂತೆ ಒತ್ತಾಯಿಸಿ ಬಾಗಲಕೋಟೆ ನಗರದಲ್ಲಿಂದು ಒಳಮೀಸಲಾತಿ ವಂಚಿತ ಹೋರಾಟ ಸಮೀತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನವನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.ರಸ್ತೆಯುದ್ದಕ್ಕೆ ತಟ್ಟೆ ಹಿಡಿದು ಬಾರಿಸುತ್ತ ತಮ್ಮ ಆಕ್ರೋಶ ಹೊರಹಾಕಿದರು. ಒಳಮೀಸಲಾತಿ ವಿಚಾರವಾಗಿ ಕ್ಯಾಬಿನೆಟ್ ನಿರ್ಣಯ ಅಲೆಮಾರಿ ಸಮುದಾಯಗಳಿಗೆ ಮರಣ ಶಾಸನ ಬರೆದಿದೆ ಎಂದು ಆಕ್ರೋಶ ಹೊರಹಾಕಿ ಘೋಷಣೆ ಕೂಗಿದರು.ನಂತರ ಜಿಲ್ಲಾಡಳಿತಭವನದ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.