ಹಿಂದೂ ಮಹಾ ಗಣಪತಿ ವಿಸರ್ಜನೆ ಹಾಗೂ ಶೋಭಾ ಯಾತ್ರೆ ಅಂಗವಾಗಿ ನಗರದಲ್ಲಿ ಶನಿವಾರ ಸಂಜೆ ಪೂರ್ವಭಾವಿ ಸಭೆ ನಡೆಸಲಾಯಿತು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಹಯೋಗದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದ್ದು ಇದರ ವಿಸರ್ಜನೆ ಹಾಗೂ ಬೃಹತ್ ಶೋಭಾಯಾತ್ರೆಯ ಅಂಗವಾಗಿ ಪೂರ್ವಭಾವಿ ಸಭೆ ಶನಿವಾರ ಸಂಜೆ ನಡೆಯಿತು. ಸಭೆಯಲ್ಲಿ ವಿವಿಧ ಸಮುದಾಯಗಳ ಅಧ್ಯಕ್ಷರು ಹಾಗೂ ಮುಖಂಡರು ಕೂಡ ಭಾಗವಹಿಸಿದ್ದರು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಮುದಾಯಗಳ ಮುಖಂಡರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.