ಪ್ರಸ್ತುತ ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಹಗಲು ಮಾತ್ರ ವಿಮಾನಯಾನ ಸೇವೆ ಲಭ್ಯವಿದ್ದು ಮುಂದಿನ ನಾಲ್ಕಾರು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ್ ಅವರು ಹೇಳಿದರು.ಬುಧವಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಅವಲೋಕಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ವಿಮಾನ ನಿಲ್ದಾಣದಲ್ಲಿ ಬಾಕಿ ಇರುವ ಕೆಲವು ಸಿವಿಲ್ ಕಾಮಗಾರಿಗಳು, ಲೈಟಿಂಗ್‌ವ್ಯವಸ್ಥೆ ಮತ್ತು ನೈಟ್ ಲ್ಯಾಂಡಿಂಗ್ ಸಂಬಂಧಿಸಿದ ಕಾಮಗಾರಿಕಾಡಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತು ಕಾಮಗಾರಿ ಪ್ರಗತಿಯಲ್ಲಿದೆ ಎಂದರು.