ಹೊಳಲ್ಕೆರೆ ಪಟ್ಟಣದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಬೆಳಗ್ಗೆ 11.30 ಕ್ಕೆ ಜಿಲ್ಲಾ ಪಂಚಾಯತ್ ಚಿತ್ರದುರ್ಗ ತಾಲ್ಲೋಕು ಪಂಚಾಯತ್ ಹೊಳಲ್ಕೆರೆ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಮುಖ್ಯ ಶಿಕ್ಷಕರ ಸಂಘ, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಹೊಳಲ್ಕೆರೆ ಇವರುಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಎಂ ಚಂದ್ರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದ್ದಾರೆ