ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಕೂಡಲೇ ಸರ್ಕಾರ ಮಹಾನಗರ ಪಾಲಿಕೆಯ ಚುನಾವಣೆಯನ್ನು ನಡೆಸಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ವಿಶ್ವಾಸ್ ಒತ್ತಾಯಿಸಿದ್ದಾರೆ. ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಾಲಿಕೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದಕ್ಕೆ ಸಾಕ್ಷಿಯಾಗಿ ನಿನ್ನೆ ಒಬ್ಬ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಪಾಲಿಕೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ದಿನ ಪಾಲಿಕೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.