ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಪ್ರಕರಣದಲ್ಲಿ 4 ಮಂದಿ ಸಿಬ್ಬಂದಿ ಸೇರಿ ಐವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ - ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಬಂಧಿತರು.