ಭದ್ರಾವತಿ ತಾಲ್ಲೂಕು ಕಚೇರಿ ಮುಂಭಾಗ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘ, ಶಿವಮೊಗ್ಗ ಜಿಲ್ಲಾ ಕಬ್ಬು ಬೆಳೆಗಾರರ ಸಂಘ ಭದ್ರಾವತಿ ಘಟಕದ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗಿತ್ತು. ಕಬ್ಬಿಗೆ ಸೂಕ್ತ ಬೆಲೆ ದೊರಕಿಲ್ಲ ಎಂದು ಆರೋಪಿಸಿ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತರು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.