ಬೀದರ: ಈ ತಿಂಗಳ 15 ರಂದು ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮAದಿರದಲ್ಲಿ ಮಧ್ಯಾಹ್ನ 12.45ಕ್ಕೆ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರ 165ನೇ ಜನ್ಮಶತಮಾನೋತ್ಸವ ನಿಮಿತ್ಯ ಇಂಜಿನಿಯರ್ಸ್ ಡೇ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೀದರ ಘಟಕದ ಅಧ್ಯಕ್ಷ ವೀರಶೆಟ್ಟಿ ಮಣಗೆ ತಿಳಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.