ಪ್ರತಿಷ್ಠಿತ ಕಾಲೋನಿಯಲ್ಲಿ ರಸ್ತೆ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ. ಹೌದು ರಾಯಚೂರು ನಗರದ ಡ್ಯಾಡಿ ಕಾಲೋನಿಯ ಮುಖ್ಯ ರಸ್ತೆ ಕಾಮಗಾರಿ ಹಂತದಲ್ಲೇ ಗಿರಕಿ ಹೊಡೆಯುತ್ತಿದೆ. ಶರವೇಗದಲ್ಲಿ ಕಾಮಗಾರಿ ಆರಂಭಿಸಲಾಯಿತಾದರೂ ನಂತರದಲ್ಲಿ ಕಾಮಗಾರಿ ವೇಗ ಪಡೆದುಕೊಳ್ಳದೆ ನೆನೆಗುದಿಗೆ ಬಿದ್ದಿದೆ. ತಡೆಗೋಡೆ ಮಾತ್ರ ಒಂದು ಕೋಟಿ ವೆಚ್ಚದಲ್ಲಿ ತುರ್ತಾಗಿ ನಿರ್ಮಿಸಲಾಯಿತು. ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಲೇ ಸಂಚಾರ ಮಾಡುತ್ತಿದ್ದಾರೆ. ಮಳೆ ಬಂದರಂತೂ ಈ ರಸ್ತೆಯಲ್ಲಿ ಸಂಚಾರ ಮಾಡುವವರ ಗೋಳು ಹೇಳುತೀರದು. ಹೀಗಾಗಿ ಕೂಡಲೇ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಈ ಭಾಗದಲ್ಲಿ ಸಂಚಾರ ಮಾಡುವ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯರಾದ ವೆಂ