ವಡಿಗೇರಾ ತಾಲೂಕಿನ ಹಂಚಿನಾಳ ಗ್ರಾಮದಲ್ಲಿರುವ ಸರ್ಕಾರಿ ಭೂಮಿ ಅಲ್ಪಸಂಖ್ಯಾತರ ಖಬರಸ್ಥಾನ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ ದಿಂದ ಶುಕ್ರವಾರ ಮಧ್ಯಾನ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ, ಅಲ್ಪಸಂಖ್ಯಾತರಿಗೆ ಖಬರಸ್ಥಾನದ ಅಗತ್ಯವಿದ್ದು ಭೂಮಿ ಮಂಜೂರು ಮಾಡಬೇಕು ಹಾಗೂ ಏವೂರ ಗ್ರಾಮದಲ್ಲಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಬೇರೆಯವರಿಗೆ ಮಂಜೂರು ಮಾಡಿರುವ ಗ್ರಾಮ ಆಡಳಿತಾಧಿಕಾರಿ ಹಾಗೂ ಕೆಂಭಾವಿ ಕಂದಾಯ ನಿರೀಕ್ಷಕನ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.ಸಂಘಟನೆ ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದ್ದರು.