ಗಣೇಶ ಹಬ್ಬದ ಪ್ರಯುಕ್ತ ಆ.27ರಂದು ಜಿಲ್ಲೆಯಾದ್ಯಂತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಿದ್ದು, ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಂದೆಡೆ ಲಭ್ಯವಿರುವಂತೆ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಸಮಿತಿ ರಚನೆ ಮಾಡಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಏಕ ಗವಾಕ್ಷಿ ಸಮಿತಿಯ ಅಧ್ಯಕ್ಷರಾಗಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಡ್‍ಕಾನ್ಸ್‍ಟೇಬಲ್, ಗ್ರಾಮ ಆಡಳಿತಾಧಿಕಾರಿ, ಲೈನ್‍ಮ್ಯಾನ್ ಸದಸ್ಯರಾಗಿದ್ದಾರೆ. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಏಕ ಗವಾಕ್ಷಿ ಕೇಂದ್ರಗಳನ್ನು ಆಗಸ್ಟ್ 23 ರಿಂದ ಪ್ರಾರಂಭಿಸಲಾಗಿದೆ.