ಹಿರಿಯೂರಿನಲ್ಲಿ ನಾಳೆ ನೂತನವಾಗಿ ನಿರ್ಮಾಣಗೊಂಡ ಕೆ ಎಸ್ ಆರ್ ಟಿ ಸಿ ಬಸ್ ಘಟಕದ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಸಂಜೆ 5 ಗಂಟೆಗೆ ಈ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು ಶನಿವಾರ ಬೆಳಗ್ಗೆ 11 ಗಂಟೆಗೆ ಹುಳಿಯಾರು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಕೆ ಎಸ್ ಆರ್ ಟಿ ಸಿ ಬಸ್ ಘಟಕದ ಉದ್ಘಾಟನೆ ಹಮ್ಮಿಕೊಂಡಿದ್ದು ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ