ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಒಂದು ಗೂಡ್ಸುವಾಗ ಹಣವನ್ನು ವಶಕ್ಕೆ ಪಡೆದಿರುವ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದ್ದು ಅಕ್ರಮವಾಗಿ ಅಕ್ಕಿ ಸಂಗ್ರಹಿಸುತ್ತಿದ್ದವರ ಮೇಲೆ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.