ಜಿಲ್ಲೆಯ ವಿವಿಧ ಠಾಣೆಯ ಸೂಕ್ಷ್ಮ ಸ್ಥಳ ಹಾಗೂ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಿಶೇಷ ಬ್ರೀಫಿಂಗ್ ಸಭೆಯನ್ನ ಭಾನುವಾರ ಮಧ್ಯಾಹ್ನ 1 ಗಂಟೆಗೆ ನಡೆಸಿದರು. ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು, ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಹೊಸ ಅಪರಾಧಿಕಾ ಕಾನೂನು, ಮನೆ ಮನೆಗೆ ಪೊಲೀಸ್ ಸಕ್ರಿಯವಾಗಿ ಜಾರಿಗೆ ತರುವ ಬಗ್ಗೆ ಮತ್ತು ಮುಂಬರುವ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಬಗ್ಗೆ ತಿಳಿಸಿದರು