ರಾಜ್ಯ ಸರ್ಕಾರದ ಸಂಪುಟ ಉಪಸಮಿತಿ ನೇಮಕ ಹಿನ್ನಲೆಯಲ್ಲಿ ಬಿ ಬಿ ಎಂ ಪಿ ನೈಸ್ ಕಂಪನಿಗೆ ಯಾವುದೇ ರಸ್ತೆ ನಿರ್ಮಾಣ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಲು ಹಾಗೂ ಅಕ್ರಮ ಕಾನೂನು ಬಾಹಿರ ರಸ್ತೆ ಕಾಮಗಾರಿ ವಿರುದ್ಧ ಪ್ರತಿಭಟಿಸುವ ರೈತರಿಗೆ ಹಾಗೂ ರೈತ ಮುಖಂಡಿರಿಗೆ ರಕ್ಷಣೆ ನೀಡಲು ಆಗ್ರಹಿಸಿ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿಯಾಗಿ ಶ್ರೀನಿವಾಸಪುರ ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗ ತಾಲ್ಲೂಕು ಕೆಪಿಆರ್‌ಎಸ್‌ವತಿಯಿಂದ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಪವಿತ್ರ ಮೂಲಕ ಮುಖ್ಯ ಮಂತ್ರಿಗಳಿಗೆ ತಮ್ಮ ಬೇಡಿಕೆಗಳನ್ನು ನಿವಾರಿಸುವ ಸಲುವಾಗಿ ಮನವಿ ಪತ್ರವನ್ನು ರವಾನಿಸುವಂತೆ ಸಲ್ಲಿಸಿದರು.