ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಯುಕ್ತರ ನಿರ್ದೇಶನದಂತೆ ಸ್ವಚ್ಛತಾ ಅಭಿಯಾನ ಹಾಗೂ ಅಡೆತಡೆಯಿಲ್ಲದ ಮತ್ತು ಪಾದಚಾರಿಗಳಿಗೆ ಅನುಕೂಲಕರ ಪಾದಚಾರಿ ಮಾರ್ಗ ನಿರ್ಮಿಸುವ ಉದ್ದೇಶದಿಂದ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನ ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ನಡೆಸಲಾಯಿತು.ಪಾಲಿಕೆಯ ವ್ಯಾಪ್ತಿಯಲ್ಲಿ ಅನೇಕ ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ತಪಾಸಣೆ ನಡೆಸಿ, 19 ಪ್ರಕರಣಗಳಿಂದ ಒಟ್ಟಾರೆಯಾಗಿ ರೂ.1,40,500/- ಗಳ ದಂಡದ ಮೊತ್ತವನ್ನು ವಸೂಲಿ ಮಾಡಲಾಯಿತು.ಈ ವೇಳೆ ನಗರ ಪಾಲಿಕೆಗಳ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಎ.ಜಿ.ಎಂ ಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.