ವ್ಯಕ್ತಿಯ ಪೂರ್ಣ ಪ್ರಮಾಣದ ವಿಕಸವಾಗಬೇಕಾದರೆ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ. ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಯಲ್ಲಿ ತೊಡಗುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಶ್ರೀಧರ್ ತಿಳಿಸಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ ಇವರ ಸಹಯೋಗದಲ್ಲಿ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ಶುಕ್ರವಾರ ಗದಗ ಬೆಟಗೇರಿಯ ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.