ನಿರಂತರ ಮಳೆಯಿಂದ ಮಡಿಕೇರಿ- ಸಂಪಾಜೆ ಹೆದ್ದಾರಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ತಡೆಗೋಡೆ ಕೆಳಭಾಗದ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಸಂಭವಿಸಿದ ಜಲಸ್ಫೋಟ ಮತ್ತು ಭೂಕುಸಿತದಲ್ಲಿ ಹಲವು ಪ್ರದೇಶಗಳು ಅಪಾಯಕ್ಕೆ ಸಿಲುಕಿದ್ದವು. ಮಡಿಕೇರಿ ನಗರದ ಸಮೀಪ ಮಂಗಳೂರಿಗೆ ತೆರಳುವ ಹೆದ್ದಾರಿ ಕೂಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪತ್ರಿವರ್ಷ ಭೂಕುಸಿತ ಉಂಟಾಗುವ ಅಪಾಯವಿದ್ದ ಕಾರಣ ಸರಕಾರ ಬೃಹತ್ ತಡೆಗೋಡೆಯನ್ನು ನಿರ್ಮಿಸಿತ್ತು. ಆದರೆ ಕಳೆದ ಒಂದು ತಿಂಗಳಿನಿAದ ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮಂಗಳೂರು ರಸ್ತೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಂದು ಸ್ಥಳಕ್ಕೆ ಭೇ