ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಸಹನೀಯವಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೆಪ್ಟೆಂಬರ್ 30ರಂದು ಸಂಜೆ 6 ಗಂಟೆಗೆ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 2025ಕ್ಕೆ ಸಂಬಂಧಿಸಿದಂತೆ ನೋಂದಣಾಧಿಕಾರಿಗಳು ಹಾಗೂ ಸಹಾಯಕ ನೋಂದಣಾಧಿಕಾರಿಗಳ 2ನೇ ಹಂತದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 2025 ರ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳು ಹಾಗೂ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.