ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ ನಡೆದ ಮಹಾಗಣಪತಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡರು. ರವಿವಾರ ಮಧ್ಯಾಹ್ನ ೧೨ ಗಂಟೆ ಸುಮಾರಿಗೆ ವಿಘ್ನನಿವಾರಕನಾದ ಶ್ರೀ ಗಣೇಶನ ದರ್ಶನ ಪಡೆದು, ನಾಡಿನ ಎಲ್ಲರ ಸುಖ-ಶಾಂತಿ, ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.