ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಅ.30 ರಂದು ನಗರದ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಆಯೋಜನೆಗೆ ಕ್ರಮಕೈಗೊಳ್ಳುವಂತೆ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ ಪಟೇಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಉದ್ಯೋಗ ಮೇಳ ಕುರಿತು ಅಧಿಕಾರಿಗಳೊಂದಿಗೆ ಪೂರ್ವ ಸಿದ್ದತಾ ಸಭೆ ನಡೆಸಿ ಮಾತನಾಡಿದ ಅವರು ಯುವ ಜನತೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಿಂದಲೂ ಪ್ರಚಾರ ನೀಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.