ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಶಾಶ್ವತ ಪೆಟ್ಟಿಗೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಆಯುಕ್ತರಾದ ರಮೇಶ್ ಡಿ.ಎಸ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಬೆಳ್ಳಂದೂರು ವಾರ್ಡ್ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ ಬೆಳ್ಳಂದೂರಿನ ವಿಪ್ರೋ ಬಳಿಯ ಪಾದಚಾರಿ ಮಾರ್ಗದಲ್ಲಿ ಶಾಶ್ವತವಾಗಿ ಅಳವಡಿಸಿಕೊಂಡಿರುವ ಪೆಟ್ಟಿಗೆಗಳನ್ನು ಗಮನಿಸಿ, ಸ್ಥಳದಲ್ಲಿಯೇ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. ಮತ್ತೆ ಈ ರೀತಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸುವುದುದಾಗಿ ಎಚ್ಚರಿಕೆ ನೀಡಿದರು.