ಹಾಸನದಲ್ಲಿ ಗಣೇಶೋತ್ಸವ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು 9 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸದಾಶಿವನಗರದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಅವರು, ನಿಜವಾಗಿಯೂ ದುರಂತ ನೋಡಿ ನೋವಾಗಿದೆ, ಸಣ್ಣ ಸಣ್ಣ ವಯಸ್ಸಿನವರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳು ಗಾಯಾಳುಗಳ ಚಿಕಿತ್ಸೆ ಬರಿಸುವುದಾಗಿ ಹೇಳಿದ್ದಾರೆ. ಪರಿಹಾರ ಕೂಡ ಘೋಷಣೆ ಮಾಡಿದ್ದಾರೆ.ಬಹಳ ದುರಂತ ಇದು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು, ಅದನ್ನ ಪೊಲೀಸರು ತೆಗೆದುಕೊಳ್ಳುತ್ತಾರೆ ಎಂದರು.