ಸೆ. 3ರಂದು ನಗರದಲ್ಲಿ ಬಸವ ಸಂಸ್ಕೃತಿ ಅಭಿಯಾನ ನಡೆಯಲಿದೆ ಎಂದು ಬಸವ ಸಂಸ್ಕೃತಿ ಅಭಿಯಾನ ಸಮಿತಿ ಅಧ್ಯಕ್ಷ ಬಸವರಾಜ ಧನ್ನೂರ ಅವರು ತಿಳಿಸಿದರು. ಬಸವ ಸಂಸ್ಕೃತಿ ಅಭಿಯಾನ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಮಧ್ಯಾಹ್ನ 2ಕ್ಕೆ ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಅವರು ವಿವರಿಸಿದರು. ಈ ವೇಳೆ ಸಮಿತಿಯ ಇತರೆ ಪದಾಧಿಕಾರಿಗಳು ಹಾಜರಿದ್ದರು.